ಎಸ್‌ಐಆರ್‌ನಲ್ಲಿ ಮತದಾರರ ಹಕ್ಕು ಕಸಿಯುವ ಆತಂಕ: ಪ್ರಕಾಶ್ ರಾಜ್

ಎಸ್‌ಐಆರ್ ಪ್ರಕ್ರಿಯೆ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹ
ಬೆಳಗಾಯಿತು ವಾರ್ತೆ
ಬಳ್ಳಾರಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಅರ್ಹ ಮತದಾರರ ಹಕ್ಕು ಕಳೆದುಹೋಗುವ ಆತಂಕವಿದೆ ಎಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಹೇಳಿದರು.
ಬಳ್ಳಾರಿಯಲ್ಲಿ ನಡೆದ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ನಲ್ಲಿ ಹಲವು ಗೊಂದಲಗಳಿದ್ದು, ಜನರಿಗೆ ಸೂಕ್ತ ಅರಿವು ಮೂಡಿಸದೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಬದುಕಿರುವವರನ್ನೇ ಮೃತಪಟ್ಟವರು ಎಂದು ನಮೂದಿಸಿರುವ ಘಟನೆಗಳು ನಡೆದಿವೆ. ನೋಟಿಸ್ ನೀಡುವಲ್ಲಿಯೂ ಸ್ಪಷ್ಟತೆ ಇಲ್ಲ ಎಂದರು.
ರಾಜ್ಯಾದ್ಯಂತ ಪ್ರವಾಸ ನಡೆಸಿ ಮತದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ದಾಖಲಿಸಿ, ಸೆ.30ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಎಸ್‌ಐಆರ್ ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪಾತ್ರದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ಅಗತ್ಯ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪಿ. ಗಾದಪ್ಪ, ಅಲ್ಲಂ ಪ್ರಶಾಂತ್, ಎಚ್. ಸಿದ್ದಣ್ಣ, ಹುಮಮಾಯನ್ ಖಾನ್, ಸತ್ಯಬಾಬು, ಮಾಧವ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles