ತ್ರಿಕೋನ ಪ್ರೇಮಕಥೆ ಆಧಾರಿತ ಬಿಜಿಎಂ ಚಿತ್ರದ ಚಿತ್ರಿಕರಣ ಪ್ರಾರಂಭ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ತ್ರಿಕೋನ ಪ್ರೇಮಕಥೆಯನ್ನು ಒಳಗೊಂಡ ‘ಬಿಜಿಎಂ’ ಚಿತ್ರದ ಚಿತ್ರಿಕರಣಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಕುರಿತು ಚಿತ್ರದ ನಿರ್ದೇಶಕ ರಮೇಶ್ ಭಿಮರಾಯಪ್ಪ ಅವರು ಮಾಹಿತಿ ನೀಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಚಿತ್ರಿಕರಣಕ್ಕಾಗಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಈ ಚಿತ್ರದಲ್ಲಿ ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಲಾಗಿದೆ. ಈ ಚಿತ್ರವನ್ನು ರಾಮಾಯಣದ ಮುಖ್ಯ ದೃಶ್ಯ ಗಳನ್ನು ಆಧರಿಸಿ ಚಿತ್ರಿಕರಣ ಮಾಡಲಾಗುತ್ತಿದೆ. ಈ ಚಿತ್ರದ ಚಿತ್ರಿಕರಣ ಬಳ್ಳಾರಿ ಜಿಲ್ಲೆಯ ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿದರು.
ಈ ಚಿತ್ರವು ಪ್ರೇಮವನ್ನು ಕೇಂದ್ರವಾಗಿಟ್ಟುಕೊಂಡ ಕಥಾವಸ್ತುವನ್ನು ಹೊಂದಿದ್ದು, ತ್ರಿಕೋನ ಪ್ರೇಮಕಥೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶ ಹೊಂದಿದೆ ಎಂದು ನಿರ್ದೇಶಕರು ವಿವರಿಸಿದರು.
ಈ ಸಂದರ್ಭದಲ್ಲಿ ಚಿತ್ರದ ನಾಯಕ ನಟಿ ಪೂಜಾ, ಕಿನ್ನಾಳ ರಾಜು, ನಟರಾದ ಮಲ್ಲಿಕಾರ್ಜುನ, ದಿನೇಶ್, ಶ್ರೀನಿವಾಸ್ ಸೇರಿದಂತೆ ಚಿತ್ರತಂಡದ ಇತರ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles