ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಪೊರ್ಟ್ ಹತ್ತಿರ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಬೊಂಬುಗಳು ಸುಟ್ಟು ಹೋಗಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಗೋವಿಂದಸ್ವಾಮಿ ಅವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಶಾಖದಿಂದ ಸುತ್ತಮುತ್ತಲಿನ ನಾಲ್ಕು ಮನೆಗಳಿಗೆ ಸಹ ಹಾನಿಯಾಗಿದೆ. ಬೆಂಕಿ ಹತ್ತಿರೋದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವೇ ಕ್ಷಣಗಳಲ್ಲಿ ಜ್ವಾಲೆಗಳು ಮುಗಿಲೆತ್ತರಕ್ಕೆ ಏರಿದ ಪರಿಣಾಮ ಅಂಗಡಿಯಲ್ಲಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಬೊಂಬುಗಳು ಬೆಂಕಿಗೆ ಆಹುತಿಯಾಗಿವೆ.
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಅಗ್ನಿ ಶಾಮಕದಳದ ಸಿಬ್ಬಂದಿ ತಿಳಿಸಿದ್ದಾರೆ.





