ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ತಾಲ್ಲೂಕಿನ ಚಾಗನೂರು ಗ್ರಾಮದಲ್ಲಿ ಬುಧವಾರ ಭಾರೀ ಬೆಂಕಿ ಅವಘಡ ಸಂಭವಿಸಿ, 20ಕ್ಕೂ ಹೆಚ್ಚು ಬಣವೆಗಳು ಬೆಂಕಿಗಾಹುತಿಯಾಗಿವೆ. ಒಂದು ಬಣವೆಯಲ್ಲಿ ಕಾಣಿಸಿಕೊಂಡ ಬೆಂಕಿ ತೀವ್ರವಾಗಿ ಹಬ್ಬಿ ಪಕ್ಕದಲ್ಲಿದ್ದ ಇತರೆ ಬಣವೆಗಳಿಗೂ ವ್ಯಾಪಿಸಿಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಬೆಂಕಿ ಆರಂಭದಲ್ಲಿ ನಿಯಂತ್ರಣಕ್ಕೆ ಬಾರದ ಕಾರಣ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅವಘಡದಲ್ಲಿ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದ್ದು, ನಿಖರ ಹಾನಿಯ ಅಂದಾಜು ಇನ್ನಷ್ಟೇ ತಿಳಿದುಬರಬೇಕಿದೆ. ಬೆಂಕಿ ಕಾಣಿಸಿಕೊಂಡ ಕಾರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ದೈನಂದಿನ ಸುದ್ದಿಗಳಿಗಾಗಿ 9900003077ಗೆ ಸಂಪರ್ಕಿಸಿ





