ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಶಾಂತಿ ನಗರ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಾಮಾಂಜಿನೆಮ್ಮ ಅವರಿಗೆ ಸೇರಿದ ಬಣವೆ ಸಂಪೂರ್ಣವಾಗಿ ದಹನಗೊಂಡಿದೆ. ಬೆಂಕಿ ಕಾಣಿಸಿಕೊಂಡ ಕ್ಷಣದಲ್ಲೇ ವೇಗವಾಗಿ ವ್ಯಾಪಿಸಿದ ಕಾರಣ ಬಣವೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿ, ಕುಟುಂಬಕ್ಕೆ ಭಾರೀ ನಷ್ಟ ಉಂಟಾಗಿದೆ.
ಘಟನೆಯ ಮಾಹಿತಿ ತಿಳಿದುಕೊಂಡ ತಕ್ಷಣ ವಾರ್ಡ್ ನಂ. 34ರ ಸದಸ್ಯರು ಹಾಗೂ ಮಾಜಿ ಮಹಾಪೌರರಾದ ರಾಜೇಶ್ವರಿ ಸುಬ್ಬರಾಯುಡು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೀಡಿತ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ತಮ್ಮ ವೈಯಕ್ತಿಕ ನಿಧಿಯಿಂದ 11,000 ಧನಸಹಾಯ ನೀಡಿದರು.
ಇದೇ ವೇಳೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯುವ ಪರಿಹಾರ ಹಾಗೂ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಘಟನಾ ಸ್ಥಳದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಬ್ಬರಾಯುಡು, ಯೋಗಾನಂದ, ವಿಷ್ಣು ಸೇರಿದಂತೆ ಹಲವರು ಉಪಸ್ಥಿತರಿದ್ದರು.






