ರೇಡಿಯೋ ಪಾರ್ಕ್ ಬಳಿ ದಿ ರಿವೈವ್ ಹೌಸ್‌ಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ರೇಡಿಯೋ ಪಾರ್ಕ್ ಬಳಿ ಇರುವ ದಿ ರಿವೈವ್ ಹೌಸ್‌ನಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ರಿವ್ಯೂ ಹೌಸ್‌ನಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಗೊಂಡರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು.
ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಜನರು ಜಮಾಯಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ಸಂಭವಿಸಿರುವ ಹಾನಿಯ ಪ್ರಮಾಣದ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles