ಬೆಳಗಾಯಿತು ವಾರ್ತೆ | Www.belagayithu.in
ವೆಟ್ಲಪಾಲೆಂ (ಆಂಧ್ರಪ್ರದೇಶ): ಕಾಕಿನಾಡ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 18 ಮಂದಿ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆಂಧ್ರಪ್ರದೇಶದ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ.
ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿ ಘಟನೆ ಜರುಗಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಹತ್ತಿರದ ಭತ್ತದ ಗದ್ದೆಗಳಿಗೆ ಅಪ್ಪಳಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ 18 ಮಂದಿ ಮೃತಪಟ್ಟಿದ್ದಾರೆ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾನು ಘಟನಾ ಸ್ಥಳಕ್ಕೆ ತೆರಳುತ್ತಿದ್ದೇನೆ‘ ಎಂದು ಅನಿತಾ ಅವರು ತಿಳಿಸಿದ್ದಾರೆ.





