ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು : ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಅಪಾರ.