ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಬೆಳಗಾಯಿತು ವಾರ್ತೆ| Www.belagayithu.in
ಆನೆಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ  ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ‘ಬೆಳ್ಳಿ ಗದೆ’ಯನ್ನು ಉಡುಗೊರೆಯಾಗಿ ನೀಡಿ, ಅಭಿನಂದಿಸಿ ಗೌರವಿಸಿದರು.
ಮುಖ್ಯಾಂಶಗಳು
ಸೂರ್ಯನಗರದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ದೇಶದ ಎರಡನೇ ದೊಡ್ಡ ಸ್ಟೇಡಿಯಂ ನಿರ್ಮಾಣವಾಗಲಿದೆ.
ಆನೇಕಲ್‌ನ ಇಂಡ್ಲವಾಡಿಯಲ್ಲಿ 900 ಕೋಟಿ ವೆಚ್ಚದ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿಪೂಜೆ ನಡೆದಿದೆ.
ಶಾಸಕ ಆನೇಕಲ್ ಶಿವಣ್ಣ ಸಿಎಂ, ಡಿಸಿಎಂ ಅವರಿಗೆ ಬೆಳ್ಳಿ ಗದೆ ನೀಡಿ ಅಭಿನಂದಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles