28.4 C
Bellary
Sunday, April 14, 2024

Localpin

spot_img

ರಾಜಕೀಯಕ್ಕೆ ಗುಡ್ ಬೈ

ಬೆಳಗಾಯಿತು ವಾರ್ತೆ |www.bleagayithu.in

ನವದೆಹಲಿ: ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್‌ ಗಂಭೀರ್ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. 2019 ರ ಲೋಕಸಭಾ ಚುನಾವಣೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದ ಅವರು, ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು.

ನಾನು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಗಮನಹರಿಸಬಹುದಾಗಿದೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್! ಎಂದು ಗಂಭೀರ್ ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles