ಬೆಳಗಾಯಿತು ವಾರ್ತೆ
ಬಳ್ಳಾರಿ: ಕರ್ನಾಟಕ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವದ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಳ್ಳಾರಿಗೆ ಆಗಮಿಸಿದ್ದು, ಜಿಲ್ಲಾಡಳಿತದ ವತಿಯಿಂದ ಭಾನುವಾರ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಪೊಲೀಸ್ ಇಲಾಖೆಯಿಂದ ರಾಜ್ಯಪಾಲರು ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.





