ಅಂಬೇಡ್ಕರ್ ಜಯಂತಿ ಅಂಗವಾಗಿ ಭವ್ಯ ಕಲಾ ತಂಡಗಳ ಮೆರವಣಿಗೆಗೆ ಚಾಲನೆ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮ
ಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ಭವ್ಯ ಕಲಾ ತಂಡಗಳ ಮೆರವಣಿಗೆಗೆ ಮೇಯರ್ ಗಾದೆಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಲೀಡ್ಕರ್ ಮಂಡಳಿಯ ಅಧ್ಯಕ್ಷ ಮುಂಡ್ರಗಿ ನಾಗರಾಜ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಜಿಲ್ಲಾ ಪಂಚಾಯತ್ ಸಿಇಒ ಮೊಹಮ್ಮದ್ ಸುಮೇರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ, ಹೆಚ್.ಆರ್. ಗವಿಯಪ್ಪ ವೃತ್ತದ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ತಲುಪಿ, ಅಲ್ಲಿಂದ ಮರಳಿ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮಾಪ್ತಿಯಾಯಿತು.
ನಗರದಲ್ಲಿ ಮೆರವಣಿಗೆಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ವಿವಿಧ ಕಲಾ ತಂಡಗಳು ತಮ್ಮ ವೈವಿಧ್ಯಮಯ ಪ್ರದರ್ಶನಗಳ ಮೂಲಕ ಗಮನ ಸೆಳೆದವು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles