30.1 C
Bellary
Friday, September 29, 2023

Localpin

spot_img

ಬಳ್ಳಾರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಅದ್ದೂರಿ ಚಾಲನೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿಗಳನ್ನ ನೀಡಿತ್ತು. ಅವುಗಳನ್ನ ಒಂದೊAದಾಗಿ ಜಾರಿ ಮಾಡಲಾಗುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಅವರ ಬಾಯಿ ಮುಚ್ಚಿಸುವ ಕೆಲವು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಿಜೆಪಿಯವರು ಈ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಬಿಜೆಪಿ ಸರ್ಕಾರ ಮಾಡಿದ ಬೆಲೆ ಏರಿಕೆಯನ್ನು ಮುಚ್ಚಿ ಹಾಕಲು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರು ಮಾಡಿರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ. ಬಡವರಿಗೆ ಸಹಾಯವಾಗುವ ಯೋಜನೆಯನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಹೇಳುವ ಅವರು ಈ ಯೋಜನೆಗಳನ್ನು ಸಹಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ ಎಂದರು.
ಈ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ನಮ್ಮ ಐದು ಶಾಸಕರು ಸೇರಿ ಪಂಚ ಪಾಂಡವರAತೆ ಸೇರಿ ಶ್ರಮಿಸುತ್ತೇವೆ ಎಂದರು.
ಜಿಲ್ಲೆಯಲ್ಲಿ ಯಾರು ಶಿಕ್ಷಣದಿಂದ ದೂರ ಆಗಬಾರದು, ಯಾವ ವಿದ್ಯಾರ್ಥಿಗಳಿಗೂ ತೊಂದರೆ ಆಗದಂತೆ ಶಿಕ್ಷಣಕ್ಕೆ ಒತ್ತು ನೀಡುತ್ತೆವೆ ಎಂದ ಅವರು, ಬರುವ ತಿಂಗಳಿAದ ೨೦೦ ಯುನೀಟ್ ವಿದ್ಯುತ್ ಬಳಕೆ ಮಾಡುವವರಿಗೆ ಬಿಲ್ ಬರಲ್ಲ. ಹಳೆ ಬಾಕಿ ಉಳಿಸಿಕೊಂಡವರು ಬಾಕಿ ಕಟ್ಟಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ನಾವು ಯಾವುದೇ ಪಕ್ಷಪಾತ ನೋಡದೆ ಸರ್ಕಾರದ ಯೋಜನೆಗಳನ್ನು ಪ್ರತಿಯೊಂದು ಮನೆಗೆ ತಲುಪಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತವೆ ಎಂದರು.
ನಗರ ಶಾಸಕ ಭರತ್ ರೆಡ್ಡಿ ಅವರು ಮಾತನಾಡಿ, ಇಂದು ನಾವು ನುಡಿದಂತೆ ನಡೆದಿದ್ದೆವೆ ಎನ್ನುವುದಕ್ಕೆ ಈ ದಿನ ಸಾಕ್ಷಿಯಾಗಿದೆ. ಕೆಲವರು ಟೀಕೆ ಮಾಡುತ್ತಾರೆ ಅದಕ್ಕೆ ನಾವು ಆಸ್ಪದ ನೀಡಲ್ಲ. ಕಾಂಗ್ರೆಸ್ ಸರ್ಕಾರ ನೀಡುವ ಪ್ರತಿಯೊಂದು ಯೋಜನೆ ಜಾರಿ ಮಾಡಿ ಬಡವರಿಗೆ ಅನುಕೂಲ ಮಾಡುತೇವೆ. ಇದರ ಜೊತೆಗೆ ಮುಂದಿನ ತಿಂಗಳು ಗೃಹಲಕ್ಷಿö್ಮÃ ಯೋಜನೆಯಡಿ ನೋಂದಾಯಿಸಿಕೊAಡ ಪ್ರತಿ ಗೃಹಿಣಿಯರಿಗೆ ೨ ಸಾವಿರ ಹಣ ನೀಡಲಾಗುತ್ತದೆ. ಜತೆಗೆ ನಾನು ಬಳ್ಳಾರಿ ನಗರದ ಜನರಿಗೆ ನೀಡಿದ ಮಾತಿನಂತೆ ೫ ಸಾವಿರ ಮನೆಯನ್ನು ಬಳ್ಳಾರಿ ನಗರದ ಜನರಿಗೆ ನೀಡಲು ನಿರ್ಧರಿಸಿದ್ದೆನೆ. ಜಿಲ್ಲೆಯ ಅಭಿವೃದ್ಧಿಗೆ ನಾನು ಸದಾ ಶ್ರಮಿಸುತ್ತೆನೆ. ಜೊತೆಗೆ ಭ್ರಷ್ಟಮುಕ್ತ ಬಳ್ಳಾರಿಗೆ ತಾವೆಲ್ಲರೂ ಕೈ ಜೋಡಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಡೂರು ಶಾಸಕ ಈ. ತುಕಾರಾಮ್, ಜೆ.ಎನ್ ಗಣೇಶ್, ಮಹಾ ಪೌರರಾದ ಡಿ. ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮೀಶ್ರಾ, ಎಸ್ಪಿ ರಂಜೀತ್ ಕುಮಾರ್ ಬಂಡಾರು, ಸಿಇಓ ರಾಹುಲ್ ಶರಣಪ್ಪ ಸಂಕನೂರು, ಎಸಿ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಜೆಸ್ಕಾಂನ ಅಧಿಕ್ಷಕರಾದ ವೆಂಕಟೇಶ್, ಉಪ ಮಹಾ ಪೌರರಾದ ಜಾನಕಮ್ಮ ಸೇರಿದಂತೆ ಪಾಲಿಕೆ ಸದಸ್ಯರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,873FollowersFollow
0SubscribersSubscribe
- Advertisement -spot_img

Latest Articles