25.2 C
Bellary
Friday, June 21, 2024

Localpin

spot_img

ಆ. 30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ಬಳ್ಳಾರಿ: ರಾಜ್ಯ ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ವೀಕ್ಷಣೆಗೆ ಜಿಲ್ಲೆಯ ಎಲ್ಲಾ ವಾರ್ಡ್ ಮತ್ತು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್.ಇ.ಡಿ ಪರದೆಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಯ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾವು ಘೋಷಣೆ ಮಾಡಿದ ಐದು ಗ್ಯಾರಂಟಿಗಳು ಜನಪರವಾಗಿದ್ದು, ಅವುಗಳನ್ನ ಜನರಿಗೆ ತಲುಪಿಸುವ ಸಲುವಾಗಿ ಒಂದೊಂದಾದ ಜಾರಿ ಮಾಡಲಾಗುತ್ತಿದ್ದು, ಗೃಹ ಲಕ್ಷ್ಮೀ ಯೋಜನೆಯನ್ನು ಇದೇ ತಿಂಗಳು ಜಾರಿ ಮಾಡಲಾಗುತ್ತಿದೆ.
ಈ ಯೋಜನೆ ಪ್ರತಿಯೊಂದು ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ನೀಡುವ ಯೋಜನೆಯಾಗಿದ್ದು, ಬಡ ಮಹಿಳೆಯರಿಗೆ ಬಹಳ ಅನುಕೂಲವಾಗಲಿದೆ.
ಗೃಹಲಕ್ಷ್ಮೀ ಯೋಜನೆಗೆ ಬಳ್ಳಾರಿ ಜಿಲ್ಲೆಗೆ 49.48 ಕೋಟಿ ಹಣ ಜಮಾ ಮಾಡಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ನೊಂದಣಿಯಲ್ಲಿ ಶೇ. 86.05% ನೊಂದಣಿಯಾಗಿದ್ದು, ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆ 5ನೇ ಸ್ಥಾನದಲ್ಲಿದೆ ಎಂದರು.
ಇಗಾಗಲೇ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೊಂದಣಿಗೆ 301180 ರಷ್ಟು ಗುರಿ ಹೊಂದಿದ್ದು, ಅದರಲ್ಲಿ 259161 ರಷ್ಟು ಮಹಿಳೆಯರು ನೊಂದಣಿ ಮಾಡಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮೀಶ್ರಾ, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಪಾಲಿಕೆ ಮಹಾಪೌರರಾದ ಡಿ. ತ್ರಿವೇಣಿ, ಉಪಮಹಾ ಪೌರರಾದ ಜಾನಕಿ ಹಾಜರಿದ್ದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles