ಬೆಳಗಾಯಿತು ವಾರ್ತೆ
ಬಳ್ಳಾರಿ: ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದ್ದು, ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಗ್ರಾಮ ಒನ್ ಕೇಂದ್ರದಲ್ಲಿ ಗೃಹಿಣಿಯರು ಜಮಾಯಿಸುತ್ತಿದ್ದಾರೆ. ಆದರೆ ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡುವುದಕ್ಕೆ ಹಣ ಪಡೆಯುತ್ತಿರುವು ಕಂಡು ಬಂದಿದ್ದು, ಗ್ರಾಮ್ ಒನ್ ಕೇಂದ್ರದ ಕಂಪ್ಯೂಟರ್ ಆಪರೇಟರ್ ಮೇಲೆ ಚೋರನೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಗೃಹಲಕ್ಷ್ಮೀ ಯೋಜನೆ ಪ್ರತಿಯೊಂದು ಕುಟುಂಬದ ಯಜಮಾನಿಗೆ 2 ಸಾವಿರ ಹಣ ನೀಡಲು ನೋಂದಣಿ ಮಾಡಲು ಅವಕಾಶ ಮಾಡಲಾಗಿದ್ದು, ಇದರ ನೋಂದಣಿಗೆ ಯಾವುದೇ ರೀತಿಯ ಹಣ ತಗೆದುಕೊಳ್ಳಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ್ದರು, ಬಳ್ಳಾರಿ ತಾಲೂಕಿನ ಅಂಕಮನಾಳ ಗ್ರಾಮದಲ್ಲಿ ಒಬ್ಬೊಬ್ಬರಿಂದ 50 ರೂಪಾಯಿ ಪಡೆಯುತ್ತಿದ್ದ ಖಚಿತ ಮಾಹಿತಿಯೊಂದಿಗೆ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಗ್ರಾಮ ಒನ್ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಅವರ ವಿರುದ್ಧ ಎಫ್ ಐ ಆಥ್ ದಾಖಲು ಮಾಡಿದ್ದಾರೆ.
ರಾಜ್ಯ ಸರ್ಕಾರ ಕಡು ಬಡವರಿಗಾಗಿ ಈ ಯೋಜನೆ ತಂದಿದ್ದು, ಅವರಿಗೆ ಅನುಕೂಲ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಿದರೆ, ಇತ್ತ ಹಲವು ಗ್ರಾಮ ಒನ್ ಕೇಂದ್ರದಲ್ಲಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬರುತ್ತಿದೆ.