ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ರಾಜ್ಯದ ಜನತೆಯ ಅಭೂತಪೂರ್ವ ಆಶೀರ್ವಾದದಿಂದ ಆಡಳಿತಕ್ಕೆ ಬಂದ ನಮ್ಮ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಯ ಸಂಜೀವಿನಿಯಾಗಿವೆ ಎಂದು ಯುವ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮೋಕಾ ರಸ್ತೆಯ ಸುವರ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ‘ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ವೆಚ್ಚ ಮಾಡಿದ ಒಟ್ಟು ಮೊತ್ತ
ಬಳ್ಳಾರಿ ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಒಟ್ಟು 566.53 ಕೋಟಿ ರೂ. ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಗೆ 65.62 ಕೋಟಿ ರೂ., ಗೃಹಲಕ್ಷ್ಮಿ ಯೋಜನೆಗೆ 301.84 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 111.92 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 87 ಕೋಟಿ ರೂ., ಯುವನಿಧಿ ಯೋಜನೆಗೆ 0.15 ಕೋಟಿ ರೂ. ಸೇರಿ ಒಟ್ಟು 566.53 ಕೋಟಿ ರೂ. ಮೊತ್ತ ವೆಚ್ಚ ಮಾಡಲಾಗಿದೆ ಎಂದು ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.