21.4 C
Bellary
Saturday, February 1, 2025

Localpin

spot_img

ಹೊಸ ವರ್ಷಾಚಾರಣೆ ಹಿನ್ನೆಲೆ ತುರ್ತು ಸ್ಪಂದನೆಗೆ ಆರೋಗ್ಯ ಕವಚ 108 ಸರ್ವಸನ್ನದ್ದ

ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ಹೊಸ ವರ್ಷಾಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಪ್ರಾಣಹಾನಿ ತಡೆಯುವ ನಿಟ್ಟಿನಲ್ಲಿ ಡಿ. 31ರಂದು ರಾತ್ರಿಯಿಡಿ 108 ತುರ್ತು ಅರೋಗ್ಯ ಕವಚ ಆಂಬುಲೆನ್ಸ್ ಕರ್ನಾಟಕ ರಾಜ್ಯದ್ಯಂತ ಸನ್ನದ್ದವಾಗಲಿದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ಸಂದರ್ಭಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.
108 ಆಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ. ಹೆಚ್ಚಿನ ತುರ್ತು ಸಂದರ್ಭಗಳು ಸಂಭವಿಸಬಹುದಾದ ಪ್ರದೇಶಗಳಲ್ಲಿ ಹೆಚ್ಚುವರಿ ಆಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ವಾರದ ರಜೆಯನ್ನು ಕೂಡ ರದ್ದುಗೊಳಿಸಲಾಗಿದೆ. ಮುಂಜಾಗ್ರತವಾಗಿ ಎಲ್ಲಾ ಅಂಬುಲೆನ್ಸ್ ನಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಜ್ಜುಗೊಳಿಸಲಾಗಿದೆ.
ಬಳ್ಳಾರಿಯಲ್ಲಿ 14 ಆಂಬುಲೆನ್ಸ್ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಪ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಬಳ್ಳಾರಿ EMRI (Emergency Management and Research Institute) ಜಿಲ್ಲಾ ವ್ಯಸ್ಥಾಪಕ ನವೀನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles