ಬೆಂಗಳೂರು: ಮಲೆನಾಡು ಕರಾವಳಿಯಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಮೂರು ಹಂತದಲ್ಲಿ ಮಳೆಯಾಗುತ್ತಿದ್ದು, ವ್ಯಾಪಕವಾಗಿ ಮೂರುನಾಲ್ಕು ದಿನ ಆಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದರು.
ಮಳೆ ಪೀಡಿತ ೧೩ ಜಿಲ್ಲೆಗಳ ಜಿಲ್ಲಾಡಳಿತ ಜೊತೆ ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ೧೩ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ, ೧೭ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ. ಮಣ್ಣು ಕುಸಿತ ಆಗುವ ಕೆಳಗಡೆ ಜನರನ್ನು ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಮನೆ ಹಾನಿಯಾಗಿದ್ದರೆ ತಕ್ಷಣ ೧೦ ಸಾವಿರ ನೀಡಲು ತೀರ್ಮಾನ, ಮಳೆ ನಿಂತ ನಂತರ ಬೆಳೆ ಹಾನಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಇನ್ನು, ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಸುನಿಲ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.