ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಯಡಿಯೂರಪ್ಪ ಸೇವೆ ರಾಜ್ಯಕ್ಕೆ ಇನ್ನೂ ಅಗತ್ಯವಿತ್ತು. ಅವರ ರಾಜೀನಾಮೆ ನಿರ್ಧಾರ ಬೇಸರ ತಂದಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ. ಪಾಟೀಲ್, ಓರ್ವ ಬಿಜೆಪಿ ಕಾರ್ಯಕರ್ತನಾಗಿ ಯಡಿಯೂರಪ್ಪ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ರಾಷ್ಟ್ರೀಯ ಪಕ್ಷವಾಗಿದ್ದರಿಂದ ಪಕ್ಷಕ್ಕೆ ಅದರದ್ದೆ ಆದ ತತ್ವ, ಸಿದ್ಧಾಂತಗಳಿವೆ. ವರಿಷ್ಠರು ನೀಡಿದ ಸೂಚನೆಯಂತೆ ಯಡಿಯೂರಪ್ಪ ನಡೆದುಕೊಂಡಿದ್ದಾರೆ ಎಂದರು.