ಬೆಳಗಾಯಿತು ವಾರ್ತೆ |www.belagayithu.in
ಬೆಂಗಳೂರು ಮಾರ್ಚ್ 22: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಾದ ತೀರ್ಪು ಇಂದು (ಮಾ.22) ಪ್ರಕಟವಾಗಿದೆ.
ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ.