36.4 C
Bellary
Friday, April 12, 2024

Localpin

spot_img

2024-25ನೇ ಬಜೆಟ್ ಮಂಡನೆಯ ಪ್ರಮುಖ ಅಂಶಗಳು

ಬೆಳಗಾಯಿತು ವಾರ್ತೆ | www.belagayithu.in

ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್  ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿ 15ನೇ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ 3 ಗಂಟೆ 14 ನಿಮಿಷ ಸುದೀರ್ಘ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಗಾತ್ರ ಒಟ್ಟು 3,71,383 ಕೋಟಿ ರೂಪಾಯಿ ಆಗಿದೆ.

 • ಮದ್ಯದ ದರ ಮತ್ತೆ ಹೆಚ್ಚಳ -ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದರು
 • ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ -ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
 • ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ -ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು.
 • ವಿಜಯಪುರ ಜಿಲ್ಲೆಯಲ್ಲಿ ತೋಟಗಾರಿಕೆ ಕಾಲೇಜು – ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.
 • ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್ -ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ.
 • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ -ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.
 • 2024ರ ಮೇನಲ್ಲಿ ಕಾವೇರಿ ಹಂತ-5 ಕಾರ್ಯಾರಂಭ -5550 ಕೋಟಿ ರೂ. ವೆಚ್ಚದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿಯಿಂದ ಯೋಜನೆ. ಪ್ರತಿ ದಿನ 12 ಲಕ್ಷ ಜನರಿಗೆ 110 ಲಕ್ಷ ಲೀಟರ್ ಕುಡಿಯುವ ನೀರು ಪೂರೈಕೆ ಮಾಡಲು ಉದ್ದೇಶಿಸಲಾಗಿದೆ. 
 • ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು -2024-25ರಲ್ಲಿ 28,608 ಕೋಟಿ ಹಣ ರೂಪಾಯಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
 • ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ -ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ದೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು.
 • 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ.
 • ಸೈನ್ಸ್​ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಗೆ 10 ಕೋಟಿ ರೂ
 • ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ.
 • ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ.
 • ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ -ಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು.
 • 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ
 • 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಾಗಿಲಿಗೆ ಆಹಾರ: ಅನ್ನ ಸುವಿಧಾ ಯೋಜನೆ ಘೋಷಣೆ.
 • ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ -ಗ್ರಾಮ ಪಂಚಾಯಿತಿಗಳ ಸಭೆ, ಕಾರ್ಯಕಲಾಪಗಳ ನೇರಪ್ರಸಾರ ಮಾಡಲಾಗುವುದು. ರಾಜ್ಯದ 50 ಗ್ರಾ.ಪಂ.ಗಳಿಗೆ ಹೊಂಬೆಳಕು ಕಾರ್ಯಕ್ರಮ ಆಯೋಜನೆ ಮಾಡಲಾಗುವುದು.
 • ಬೆಂಗಳೂರಿನ 4 ಸ್ಥಳಗಳಲ್ಲಿ ಹೈಟೆಕ್​ ಕ್ರೀಡಾ ಸಂಕೀರ್ಣ
 • ಕನ್ನಡ ಭಾಷಾಂತರಕ್ಕೆ ನೂತನ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles