ಅ.23ಕ್ಕೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ:

ಮತ ಚಲಾಯಿಸಲು ನೊಂದಾಯಿತ‌ ಮತದಾರರಿಗೆ ರಜೆ ಘೋಷಣೆ

ಬೆಳಗಾಯಿತು ವಾರ್ತೆ

ಕಲಬುರಗಿ: ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೆ ಅಕ್ಟೋಬರ್ 23 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಕ್ಷೇತ್ರದಾದ್ಯಂತ ಮತದಾನ ನಡೆಯಲಿದ್ದು, ಮತ‌ ಚಲಾಯಿಸಲು ಅನುಕೂಲವಾಗುವಂತೆ ಕ್ಷೇತ್ರದ ನೊಂದಾಯಿತ ಮತದಾರರಿಗೆ ಸರ್ಕಾರ‌ರಜೆ ಘೊಷಿಸಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ತಿಳಿಸಿದ್ದಾರೆ.

ಇದಲ್ಲದೆ ಮತದಾನಕ್ಕೆ ಕ್ಷೇತ್ರದಾದ್ಯಂತ ಸ್ಥಾಪಿಸಲಾಗಿರುವ 144 ಮತದಾನ ಕೇಂದ್ರದಲ್ಲಿನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಿಗೂ ಅ.23 ರಂದು ರಜೆ ಘೋಷಿಸಲಾಗಿದೆ.

ಇನ್ನು ಮತ ಎಣಿಕೆ ಕಾರ್ಯವು ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ‌ ವಿಭಾಗದ ಭಾಸ್ಕರ‌ ಸಭಾಂಗಣದಲ್ಲಿ ನಡೆಯಲಿದ್ದು, ಅಂದು ಗಣಿತ‌‌ ವಿಭಾಗದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಭದ್ರತಾ ಕೊಠಡಿಯ ಸಿಬ್ಬಂದಿಗಳಿಗೆ ರಜೆ ಘೋಷಿಸಲಾಗಿದೆ ಎಂದಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles