11.3 C
New York
Tuesday, March 28, 2023

Buy now

spot_img

ಮಲ್ಲೇಶ್ವರಂ, ರಾಮನಗರದಲ್ಲಿ ದೊರೆಯಲಿದೆಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯ

ಬೆಂಗಳೂರು: ಹಲವು ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವರು, `ಪುರುಷರೂ ಹಲವು ಅನಾರೋಗ್ಯ ಸಮಸ್ಯೆಗನ್ನು ಎದುರಿಸುತ್ತಿರುತ್ತಿರುತ್ತಾರೆ. ಹೀಗಾಗಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಡಿಯಲ್ಲಿ ಈ ವಿನೂತನ ಯೋಜನೆಯನ್ನು ಎರಡೂ ಕಡೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಇದಕ್ಕೆ ಸಿಕ್ಕುವ ಸ್ಪಂದನವನ್ನು ಆಧರಿಸಿ ಮುಂಬರುವ ದಿನಗಳಲ್ಲಿ ಇದನ್ನು ಎಲ್ಲೆಡೆಗೂ ವಿಸ್ತರಿಸಲಾಗುವುದು. ಈ ಯೋಜನೆಯಡಿ ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರು ವೈದ್ಯಕೀಯ ಪರೀಕ್ಷೆಗಳ ಸೌಲಭ್ಯ ಕಲ್ಪಿಸುತ್ತಾರೆ ಹೆಚ್ಚಿನ ಕುಟುಂಬಗಳಿಗೆ ಪುರುಷರೇ ಆಧಾರಸ್ತಂಭದAತೆ ಇರುತ್ತಾರೆ. ಆದ್ದರಿಂದ ಇಂತಹ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇದರಿಂದಾಗಿ ಸಂಭವನೀಯ ಅನಾರೋಗ್ಯವು ಸೃಷ್ಟಿಸುವ ಆರ್ಥಿಕ ಹೊರೆ ಮತ್ತಿತರ ಸಮಸ್ಯೆಗಳಿಂದ ಪಾರಾಗಬಹುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,749FollowersFollow
0SubscribersSubscribe
- Advertisement -spot_img

Latest Articles