ಚಿತ್ರದುರ್ಗ: ಕೋವಿಡ್-19 ಎರಡನೇ ಅಲೆ ಹಿನ್ನೆಯಲ್ಲಿ ಹೋಟೆಲ್‍ಗಳಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರರಿಗೂ ಮತ್ತು ಅಡುಗೆ ತಯಾರಿಕರಿಗೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೋಟೆಲ್ ಮಾಲೀಕರಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಯೋಜಿಸಿದ್ದ ಹೋಟೆಲ್ ಮಾಲೀಕರ ಸಂಘದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.