30.6 C
Bellary
Monday, April 22, 2024

Localpin

spot_img

ಅವಮಾನವಾದ ಸ್ಥಳದಲ್ಲೇ ಸನ್ಮಾನ: ಶ್ರೀರಾಮುಲು

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ಅವಮಾನವಾಗಿದೆ. ಅವಮಾನವಾದ  ಸ್ಥಳದಲ್ಲೇ ಭಗವಂತ ಸನ್ಮಾನ ಮಾಡಿಸುವ ಕೆಲಸ ಮಾಡುತ್ತಾನೆ ಎಂಬ ವಿಶ್ವಾಸವಿದೆ. ಈ ಬಾರಿಯ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಿಮ್ಮಲ್ಲರ ಆಶೀರ್ವಾದದಿಂದ ಗೆಲ್ಲಬೇಕು ಎಂದು ಭಗವಂತನಲ್ಲಿ ಆಶಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಹೇಳಿದರು.
ನಗರದ ತಾಳೂರು ರಸ್ತೆಯಲ್ಲಿನ ಗೋವಿಂದ ಕಲ್ಯಾಣ ಮಂಟಪದಲ್ಲಿ ಬುಧವಾರ ಬಳ್ಳಾರಿ ಭಾರತೀಯ ಜನತಾ ಪಕ್ಷದ ವತಿಯಿಂದ ಬಳ್ಳಾರಿ ಗ್ರಾಮಾಂತರ ಮತ್ತು ಕೌಲ್ ಬಜಾರ್ ಮಂಡಲ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಲವು ಕಾರಣಗಳಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತರು ನಿಮ್ಮೆಲ್ಲರ ಆಶೀರ್ವಾದಿಂದ ಮತ್ತೊಮ್ಮೆ ಬಿಜೆಪಿ ಪಕ್ಷ ಬಳ್ಳಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡವ ಹಾಗೂ ಬಿಜೆಪಿ ಪಕ್ಷಕ್ಕೆ 370 ಲೋಕಸಭಾ ಸ್ಥಾನ ಹಾಗೂ ಎನ್ ಡಿ ಎ  ಒಕ್ಕೂಟಕ್ಕೆ 400 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎಂದರು.
ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಕರ್ನಾಟಕದಿಂದ ಕೊಡುಗೆ ನೀಡಬೇಕು ಜೊತೆಗೆ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶ್ರೀರಾಮುಲು ಅವರನ್ನು ಗೆಲ್ಲಿಸುವ ಕೆಲಸ ತಾವೆಲ್ಲರೂ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ವೈ.ಎಂ.ಸತೀಶ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕ, ಹಿರಿಯ ಮುಖಂಡರಾದ ಗುತ್ತಿಗೆನೂರು ವಿರುಪಾಕ್ಷ ಗೌಡ, ರಾಮಲಿಂಗಪ್ಪ, ಮುರಹರಿಗೌಡ, ಒಬಳೇಶ್,ಸೇರಿದಂತೆ ಮತ್ತಿತರರು ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles