39.6 C
Bellary
Thursday, April 25, 2024

Localpin

spot_img

ಲೋಕಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ನಾನು ಟಿಕೆಟ್ ಆಕಾಂಕ್ಷಿ

ಬೆಳಗಾಯಿತು ವಾರ್ತೆ |www.belagayithu.in

ಬಳ್ಳಾರಿ: ಜೆಡಿಎಸ್ ಪಕ್ಷದಿಂದ ನಾನು ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ನೂತನ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರು ಹೇಳಿದರು. ನಗರದಲ್ಲಿನ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಎರಡನೇ ಬಾರಿ ಜೆಡಿಎಸ್ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ ಮಾತನಾಡಿದರು ನನ್ನನ್ನು ಗುರುತಿಸಿ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಜೆಡಿಎಸ್ ಪಕ್ಷದ ಮುಖಂಡರಾದ ಹೆಚ್.ಡಿ. ದೇವೆಗೌಡ, ಕುಮಾರಸ್ವಾಮಿ, ನೇಮೀರಾಜ್ ನಾಯ್ಕ್ ಅವರಿಗೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಜಿಲ್ಲೆಯಲ್ಲಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವ ಕೆಲಸ ಮಾಡುತ್ತೇನೆ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಮರಳಿ ತರುವ ಪ್ರಯತ್ನ ಮಾಡುತ್ತೇನೆ ಎಂದರು. ಬಳ್ಳಾರಿ ಲೋಕಸಭಾ ಚುನಾವಣೆ ಜೆಡಿಎಸ್ ಪಕ್ಷದಿಂದ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಒಂದುವೇಳೆ ಜಿಲ್ಲೆಯಲ್ಲಿ ಮೈತ್ರಿ ಪಕ್ಷ ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುವೆ ಎಂದು ತಿಳಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles