ಬೆಳಗಾಯಿತು ವಾರ್ತೆ | Www.belagayithu.in
ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.





