ಬೆಳಗಾಯಿತು ವಾರ್ತೆ
ಬಳ್ಳಾರಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಡಾ. ಪಿ.ಎಸ್. ಹರ್ಷ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನವೆಂಬರ್ 18ರಂದು ಹೊರಡಿಸಿರುವ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶದಂತೆ, ಡಾ. ಪಿ.ಎಸ್. ಹರ್ಷ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯಾದ್ಯಂತ ಒಟ್ಟು 32ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. ಬೆಂಗಳೂರು ನಗರವನ್ನು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ವಿಭಾಗಗಳಾಗಿ ವಿಂಗಡಿಸಿ ಹೊಸ ಪೊಲೀಸ್ ಆಯುಕ್ತರ ನೇಮಕ ಮಾಡಲಾಗಿದೆ.
2026ರ ಜನವರಿ 7ರಂದು ಬಳ್ಳಾರಿ ವಲಯದ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಡಾ. ಹರ್ಷ ಅವರ ವರ್ಗಾವಣೆಯಿಂದ ಬಳ್ಳಾರಿ ವಲಯಕ್ಕೆ ನೂತನ ಐಜಿಪಿ ನೇಮಕವಾಗಬೇಕಿದೆ..





