ಅಕ್ರಮ ಜೂಜಾಟ: 60 ಜನರ ವಿರುದ್ಧ ಪ್ರಕರಣ ದಾಖಲು

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ :
ನಗರದಲ್ಲಿ ಅಕ್ರಮ ಜೂಜಾಟದ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಬಳ್ಳಾರಿ ನಗರದ ರೆಕಾನ್ ರಿಕ್ರಿಯೇಷನ್ (ತಿಪ್ಪಯ್ಯ) ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು, ಅಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟವನ್ನು ಪತ್ತೆಹಚ್ಚಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸುಮಾರು 60 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸ್ಥಳದಿಂದ ₹1.77 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಮುಂದುವರೆಸುತ್ತಿದ್ದಾರೆ.
ಈ ರೀತಿಯ ದಾಳಿಗಳು ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂದುವರಿಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles