ಕೊಪ್ಪಳ: ಜುಲೈ 18ರಿಂದ ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಿಡಲು ತೀರ್ಮಾನಿಸಿದ್ದು, ತುಂಗಭದ್ರಾ ಎಡ ಮತ್ತು ಬಲದಂಡೆ ಕಾಲುವೆಗಳಲ್ಲಿ ಅಕ್ರಮ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವವರ ವಿರುದ್ಧ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಆನಂದ್ ಸಿಂಗ್ ಸೂಚನೆ ನೀಡಿದರು.
ಅವರು ಮುನಿರಾಬಾದ್‌ನ ತುಂಗಭದ್ರಾ ಕಾಡಾ ಸಭಾಂಗಣದಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 115ನೇ ನೀರಾವರಿ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತುಂಗಭದ್ರಾ ಎಡದಂಡೆಯ ಮೇಲೆ ಅಕ್ರಮ ಪಂಪ್‌ಸೆಟ್‌ಗಳ ಮೂಲಕ ನೀರು ಹೊಲಗಳಿಗೆ ಬಿಡುತ್ತಿರುವುದರಿಂದ ಎಡದಂಡೆಯ ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹಯೋಗದಲ್ಲಿ ತಂಡಗಳನ್ನು ರಚಿಸಿಕೊಂಡು, ಅಕ್ರಮ ಪಂಪ್‌ಸೆಟ್‌ಗಳನ್ನು ಜಪ್ತಿ ಮಾಡಿ, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇದರಿಂದ ನೀರು ಎಡದಂಡೆಯ ಕೊನೆಯ ಭಾಗದ ರೈತರಿಗೂ ತಲುಪುತ್ತದೆ. ಸಂಬAಧಿಸಿದ ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷö್ಯ ವಹಿಸಿದರೆ ಅಂತವರನ್ನು ಅಮಾನತ್ತು ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.