ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಗುರುವಾರ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ‘ಸಿ’ ಬ್ಲಾಕ್ ನ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 49 ರಲ್ಲಿನ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್.ಎನ್., ಡಿಎಂಎಫ್ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles