ಖಮೇನಿ ಸಾವಿಗೆ ಭಾರತ ಸಂತಾಪ

ಬೆಳಗಾಯಿತು ವಾರ್ತೆ | Www.belagayithu.in
ನವದೆಹಲಿ: ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಗೆ ಭಾರತ ವಿಳಂಬವಾಗಿ ಸಂತಾಪ ವ್ಯಕ್ತಪಡಿಸಿದೆ.
ಖಮೇನಿ ಹತ್ಯೆ ಬಗ್ಗೆ ಮೌನವಹಿಸಿದ್ದ ಪ್ರಧಾನಿ ಮೋದಿ ವಿರುದ್ಧ ವಿಪಕ್ಷಗಳಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸಂತಾಪ ಸೂಚಿಸಿದೆ.
ಕೇಂದ್ರ ಸರ್ಕಾರದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕಿದ್ದು, ಹತ್ಯೆಗೀಡಾದ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೆ ಸಂತಾಪ ಸೂಚಿಸಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್‌ ಶನಿವಾರ ಮುಂಜಾನೆ ನಡೆಸಿದ್ದ ವಾಯುದಾಳಿಯಲ್ಲಿ ಖಮೇನಿ ಹತರಾಗಿದ್ದರು. ಇನ್ನೊಂದೆಡೆ, ತನ್ನ ನಾಯಕ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ ಗುಡುಗಿದೆ.
ಪ್ರತಿದಾಳಿ ನಡೆಸಿದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡಿರುವ ಎಚ್ಚರಿಕೆಯನ್ನು ಲೆಕ್ಕಿಸದೇ, ಕೊಲ್ಲಿ ರಾಷ್ಟ್ರಗಳಲ್ಲಿನ ಅದರ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್‌ ಭಾರಿ ದಾಳಿ ನಡೆಸಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles