ಬೆಳಗಾಯಿತು ವಾರ್ತೆ |www.belagayitu.in
ಬೆಂಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿಯುಳಿದಿದೆ. ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಣ ತೊಟ್ಟಿದ್ದರೆ, ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಇದರ ನಡುವೆಯೇ ಇಂಡಿಯಾ ಟಿವಿ – ಸಿಎನ್‌ಎಕ್ಸ್ ಸಮೀಕ್ಷೆಯೊಂದು ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಬಿಗ್ ಶಾಕ್ ನೀಡಿದೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸದ್ಯ ಇರುವುದಕ್ಕಿಂತ ಮೂರು ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದೆ.
ಇಂಡಿಯಾ ಟಿವಿ – ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 24 ಕ್ಷೇತ್ರಗಳಲ್ಲಿ ಜಯಗಳಿಸಿದರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಎನ್‌ಡಿಎ ಮೈತ್ರಿಯಲ್ಲಿ 22 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆಲ್ಲಲಿದ್ದು, ಜೆಡಿಎಸ್‌ನ ಅಭ್ಯರ್ಥಿಗಳು ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.