ಸತತ 3ನೇ ಬಾರಿ ವಿಶ್ವಕಪ್ ಗೆದ್ದ ಭಾರತ: ಬಳ್ಳಾರಿಯಲ್ಲಿ ಸಂಭ್ರಮ

ಬೆಳಗಾಯಿತು ವಾರ್ತೆ
ಬಳ್ಳಾರಿ:
ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಟಿ 20 ವಿಶ್ವ ಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 97 ರನ್ ಗಳ ಅಂತರದಲ್ಲಿ ಭಾರತ ಗೆದ್ದಿದ್ದು, ಬಳ್ಳಾರಿಯ ರಾಯಲ್ ವೃತ್ತದಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಭಾರತ ತಂಡವು ಸತತವಾಗಿ ಎರಡು ಟಿ20 ವಿಶ್ವಕಪ್ ಟ್ರೋಫಿ ಗೆದ್ದ ವಿಶ್ವದ ಮೊದಲ ತಂಡ ಎಂಬ ಸಾಧನೆ ಮಾಡಿದೆ. ಇದಕ್ಕೂ ಮೊದಲು, ಅಂದರೆ 2024ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು.
ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ತಲಾ ಎರಡೆರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ. ಆದರೆ, ಭಾರತ ತಂಡವು ಸತತ ಎರಡು ಬಾರಿ ಫೈನಲ್ ಟ್ರೋಫಿ ಸೇರಿದಂತೆ ಒಟ್ಟು ಮೂರು ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ.
ಸಂಜು, ಅಭಿಷೇಕ್, ಕಿಶನ್ ಮಿಂಚು
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಸಂಜು ಸ್ಯಾಮ್ಪನ್ (89 5, 452, 4X5, 6X8) (52 2, 22ಎಸೆತ, 4X6 ಹಾಗೂ 6X3) ಸ್ಪೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 7.1 ಓವರ್‌ಗಳಲ್ಲಿ 98 ರನ್ ಕಲೆಹಾಕಿತು. ನಂತರ ಬಂದ ಇಶಾನ್ ಕಿಶನ್ (54 ರನ್ 25ಎ, 4X4, 6X4) ಕೂಡ ಅಬ್ಬರಿಸಿದರು.
ಕೊನೆ ಓವರ್‌ಗಳಲ್ಲಿ ಶಿವಂ ದುಬೆ ಕೇವಲ 8 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 3 ಬೌಂಡರಿ ನೆರವಿನಿಂದ 26 ರನ್ ಕಲೆಹಾಕುವ ಮೂಲಕ ಭಾರತದ ಮೊತ್ತವನ್ನು 255 ಆಗುವಂತೆ ನೋಡಿಕೊಂಡರು.
ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡವು 19 ಓವರ್‌ನಲ್ಲಿ 159 ರನ್‌ಗಳಿ ಆಲೌಟ್ ಆಗುವ ಮೂಲಕ 96 ರನ್‌ಗಳ ಸೋಲು ಅನಯಭವಿಸಿತು.
ನ್ಯೂಜಿಲೆಂಡ್ ಪರ ಟಿಮ್ ಸೈಫರ್ಟ್ (52 ರನ್, 26 ಎಸೆತ 6X5, 4X2) ಏಕಾಂಗಿ ಹೋರಾಟ ನಡೆಸಿದರು. ಇವರನ್ನು ಹೊರತುಪಡಿಸಿ ಉಳಿದ ಯಾವುದೇ ಅಗ್ರಕ್ರಮಾಂಕದ ಬ್ಯಾಟರ್‌ಗಳು ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲವಾದರು. ಕೆಳ ಕ್ರಮಾಂಕದಲ್ಲಿ ನಾಯಕ ಮಿಚೆಲ್ ಸ್ಯಾಂಟನರ್ 43 ರನ್ ಗಳಿಸಿ ಏಕಾಂಕಿ ಹೋರಾಟ ನಡೆಸಿದರಾದರು, ತಂಡವನ್ನು ಗೆಲ್ಲಿಸಲು ಸಾಧ್ಯವಾಗಿಲ್ಲ. ಭಾರತದ ಪರ ಜಸ್‌ಪ್ರೀತ್ ಬುಮ್ರಾ 4 ಹಾಗೂ ಅಕ್ಷರ್ ಪಟೇಲ್ 3 ವಿಕೆಟ್ ಪಡೆದು ಮಿಂಚಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles