ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಇಂದಿನ ದಿನಗಳಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಇದೆ. ಹಾಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಉತ್ತಮ ಸ್ಥಾನಕ್ಕೆ ಏರಬೇಕು ಎಂದು ಚರ್ಮ ಕೈಗಾರಿಕೆ ನಿಗಮದ ಅಧ್ಯಕ್ಷ ಮುಂಡ್ರಗಿ ನಾಗರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಕಾರ್ಯಕ್ರಮವನ್ನು ಮಂಗಳವಾರ ವಾಲ್ಮೀಕಿ ಭವನದಲ್ಲಿ ಆಯೋಜನೆ ಮಾಡಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ , ಮಹಾ ಪೌರರಾದ ಪಿ. ಗಾದಪ್ಪ, ಚಿದಾನಂದಪ್ಪ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಗೋನಾಳ ಎಂ. ನಾಗಭೂಷಣ ಗೌಡ, ಸಿಒ ಮಹಮ್ಮದ್ ಹ್ಯಾರಿಸ್ ಸುಮೇರ್ , ಉಪ ನಿರ್ದೇಶಕ ರಾಮಕೃಷ್ಣ ನಾಯಕ್,ಆಶಾಲತಾ ತ್ರಿವೇಣಿ ಪತ್ತಾರ, ಶಶಿಕಾಂತ ಶಿವಪುರೆ, ಡಿವೈಎಸ್ಪಿ
ಗೋವಿಂದರಾಜ್, ಡಿ. ವೆಂಕಮ್ಮ, ನಿರ್ಮಲಾ, ನಾಗಲಕ್ಷ್ಮೀ ಸೇರಿದಂತೆ ಹಲವಾರು ಗಣ್ಯರು ಮತ್ತು ಮಹಿಳೆಯರು ಹಾಜರಿದ್ದರು.
ಜಿಲ್ಲಾಡಳಿತದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ





