ಬೆಂಗಳೂರು: ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಜ್ಯದಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರÀ್ರಧಾನಿ ನರೇಂದರ ಮೋದಿರವರು ಪಾಲ್ಗೊಂಡಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದುಕೊಟ್ಟಿತು.
ಇನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಹಲವಾರು ಗಣ್ಯರು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.
ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಆರೋಗ್ಯಪೂರ್ಣ ಶರೀರ ಮತ್ತು ಮನಸ್ಸಿನ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದ ಜನರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು “ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಜಗತ್ತಿನೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಾಗುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಯೋಗ ನಮ್ಮ ಹೆಮ್ಮೆಯ ಪರಂಪರೆ. ಸನ್ಮಾನ್ಯ ಪ್ರಧಾನಿ ಶ್ರೀ ನೇಂದ್ರ ಮೋದಿರವರ ಅವರ ದಿಟ್ಟ ಪ್ರಯತ್ನದಿಂದ ಯೋಗಕ್ಕೆ ಇಂದು ಅಂತಾರಾಷ್ಟ್ರೀಯ ಮಾನ್ಯತೆ ದೊರಕಿದೆ. ದೇಹ ಹಾಗೂ ಮನಸ್ಸನ್ನು ಕೇಂದ್ರೀಕರಿಸಿ ಶಿಸ್ತಿನ ಪಾಠ ಹೇಳುವ ಯೋಗ ಕುರಿತು ಜಾಗೃತಿ ಹೆಚ್ಚಿಸೋಣ. ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗದಿನದ ಶುಭಾಶಯಗಳು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.