ಐಪಿಎಲ್ ಬೆಟ್ಟಿಂಗ್: 18 ಪ್ರಕರಣ ದಾಖಲು

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಜಿಲ್ಲೆಯಲ್ಲಿ ಐಪಿಎಲ್ ಆರಂಭವಾದ ನಂತರದಿಂದ ಐಪಿಎಲ್ ಬೆಟ್ಟಿಂಗ್ ಸೇರಿದಂತೆ ವಿವಿಧ ಸಂಘಟಿತ ಅಪರಾಧ ಪ್ರಕರಣಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಐಪಿಎಲ್ ಬೆಟ್ಟಿಂಗ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು, 41 ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ 59,860 ನಗದು ಜಪ್ತಿ ಮಾಡಲಾಗಿದೆ. ಅಲ್ಲದೆ 17 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ ಸುಮಾರು 84,700 ಎಂದು ಅಂದಾಜಿಸಲಾಗಿದೆ.
ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ದಾಖಲಾಗಿರುವ ಇತರೆ

ಸಂಘಟಿತ ಅಪರಾಧ ಪ್ರಕರಣ:
87 ಕೆ.ಪಿ. ಕಾಯ್ದೆ (ಜೂಜಾಟ) ಅಡಿಯಲ್ಲಿ 29 ಪ್ರಕರಣಗಳು ದಾಖಲಾಗಿದ್ದು, 244 ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ 4,06,640 ನಗದು ಜಪ್ತಿ ಮಾಡಲಾಗಿದೆ.
78 ಕೆ.ಪಿ. ಕಾಯ್ದೆ (ಮಟ್ಕಾ) ಅಡಿಯಲ್ಲಿ 29 ಪ್ರಕರಣಗಳು ದಾಖಲಾಗಿದ್ದು, 54 ಆರೋಪಿಗಳನ್ನು ಬಂಧಿಸಲಾಗಿದೆ. 20,43,610 ಹಣ ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ 17 ಪ್ರಕರಣಗಳು ದಾಖಲಾಗಿದ್ದು, 38 ಆರೋಪಿಗಳನ್ನು ಬಂಧಿಸಲಾಗಿದೆ. 96,600 ಮೌಲ್ಯದ ವಸ್ತುಗಳನ್ನು ಹಾಗೂ 80 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಅವರು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles