ಬೆಳಗಾಯಿತು ವಾರ್ತೆ|www.belagayithu.in
ಐಪಿಎಲ್ ಉಚಿತ ಟಿಕೆಟ್ ಕೇಳುವುದು ತಪ್ಪು
ಬೆಂಗಳೂರು: ‘ಶಾಸಕರು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಉಚಿತ ಟಿಕೆಟ್ ಕೇಳುವುದು ತಪ್ಪು. ಪಂದ್ಯ ವೀಕ್ಷಿಸಲು ಬಯಸುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಐಪಿಎಲ್ ಕ್ರಿಕೆಟ್ ಬಗ್ಗೆ ಮಾತನಾಡುವುದು ಮಹಾಪರಾಧ. ಈಗ ಟಿಕೆಟ್ ಕೇಳುವವರು ಐಪಿಎಲ್ ದರ‍್ಘಟನೆ ಸಂರ‍್ಭದಲ್ಲಿ ಅವರು ಯಾವ ರೀತಿ ವಾಗ್ದಾಳಿ ಮಾಡಿದ್ದರು, ಪದ ಬಳಸಿದ್ದರು ಎಂದು ತೆಗೆದು ನೋಡಲಿ’ ಎಂದರು.
ಬಿಜೆಪಿ ಶಾಸಕರು ಕೂಡ ಐಪಿಎಲ್ ಟಿಕೆಟ್ ಪಡೆದಿದ್ದಾರೆ. ಐಪಿಎಲ್ ವಾಣಿಜ್ಯ ಉದ್ದೇಶಿತ ಪಂದ್ಯಾವಳಿ. ಅವುಗಳ ಬಗ್ಗೆ ಜನಪ್ರತಿನಿಧಿಗಳು ಹೆಚ್ಚು ಗಮನಹರಿಸುವುದು ಒಳ್ಳೆಯದಲ್ಲ’ ಎಂದರು.
ನಾಲ್ಕು ಕಡೆ ಕ್ರೀಡಾಂಗಣ ನರ‍್ಮಿಸಬೇಕು: ‘ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬೇರೆಡೆ ಸ್ಥಳಾಂತರಿಸಲು ನಾನು ಆಯ್ಕೆ ಮಾಡಿ, ಸೂಚಿಸಿದ ಜಾಗದಲ್ಲಿ ಹೊಸ ಕ್ರೀಡಾಂಗಣ ಮಾಡಲು ರ‍್ಕಾರ ಮನ್ನಣೆ ನೀಡಿದೆ. ಸರ‍್ಯ ಸಿಟಿಯಲ್ಲಿ ಕ್ರೀಡಾಂಗಣ ಮಾಡುವ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದು ನಾನೇ’ ಎಂದರು.
‘ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ನಾಲ್ಕು ಕ್ರೀಡಾಂಗಣ ಮಾಡಬೇಕು. ಕಂಠೀರವ ಕ್ರೀಡಾಂಗಣ, ಕೆಎಸ್‌ಸಿಎ, ಫುಟ್ಬಾಲ್ ಕ್ರೀಡಾಂಗಣ ಹೊರತಾಗಿ ಬೇರೆ ಯಾವುದೇ ಕ್ರೀಡಾಂಗಣ ಇಲ್ಲ. ಇಷ್ಟು ದೊಡ್ಡ ಜನಸಂಖ್ಯೆ ಇರುವ ನಗರದಲ್ಲಿ ಯುವಕರಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡಬೇಕಾದರೆ ನಾಲ್ಕು ದಿಕ್ಕಿನಲ್ಲಿ ಕ್ರೀಡಾಂಗಣ ನರ‍್ಮಿಸಬೇಕಂದು ಸಲಹೆ ನೀಡಿದ್ದೆ’ ಎಂದರು.





