ಬಳ್ಳಾರಿಗೆ ಜನಾರ್ದನ ರೆಡ್ಡಿ ಸುಪ್ರೀಂ ಬಿಗ್ ರಿಲೀಫ್‌

ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ಕಳೆದ ಒಂದೂವರೆ ದಶಕಗಳಿಂದ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕೊನೆಗೂ ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಜಾಮೀನು ನೀಡುವಾಗ ಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿತ್ತು.
ಆದ್ದರಿಂದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಬೆಂಗಳೂರಿನ ‘ಪಾರಿಜಾತ’ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದರು. ಜನಾರ್ದನ ರೆಡ್ಡಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಬಳ್ಳಾರಿಗೆ ಭೇಟಿ ನೀಡದಂತೆ ಹಾಕಿದ್ದ ಷರತ್ತುಗಳನ್ನು ಸಡಿಲಿಸಿದೆ. ಆದ್ದರಿಂದ ಅವರು ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles