35.2 C
Bellary
Sunday, May 12, 2024

Localpin

spot_img

ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಬೆಳಗಾಯಿತು ವಾರ್ತೆ |www.belagayithu.in
ಬೆಂಗಳೂರು, ಮಾರ್ಚ್​​ 25: ಕೆಆರ್‌ಪಿಪಿ ಪಕ್ಷ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಇಂದು ಬಿ.ಎಸ್​​.ಯಡಿಯೂರಪ್ಪ, ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜನಾರ್ದನ ರೆಡ್ಡಿ ಅವರಿಗೆ ಪಕ್ಷದ ಬಾವುಟ ನೀಡಿ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಬಿಜೆಪಿಯಲ್ಲಿ  ಕೆಆರ್‌ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ನಿನ್ನೆ ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಅವರು ನನಗೆ ಪಕ್ಷಕ್ಕೆ ಬನ್ನಿ ಅಂದರು. ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಬಿಎಸ್​ ಯಡಿಯೂರಪ್ಪ ಕಾರಣ. ಅವರು ಮುಖ್ಯಮಂತ್ರಿಯಾಗಿದ್ದಾಗ, ನನಗೆ ಸಚಿವ ಸ್ಥಾನ ಕೊಟ್ಟಿದ್ದರು. ಈಗ ಅವರ ಸುಪುತ್ರ ಇದ್ದಾರೆ. ತಂದೆ ಮಗನ ಜೊತೆ ಈಗ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಯಾವ ಷರತ್ತು ಇಲ್ಲದೆ ಕಾರ್ಯಕರ್ತನಾಗಿ ಬಿಜೆಪಿಗೆ ಸೇರಿದ್ದೇನೆ. ಯಾವದೆ ಹುದ್ದೆಯ ಆಕಾಂಕ್ಷೆ ನನಗೆ ಇಲ್ಲ ಎಂದು ತಿಳಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles