ಬಳ್ಳಾರಿ: ಜಿಲ್ಲೆಯಲ್ಲಿ ನಾಗರೀಕರಿಂದ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಸೆ.25ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ತಿಳಿಸಿದ್ದಾರೆ.
ಆದ್ದರಿಂದ ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರು ತಮ್ಮ ಅಹವಾಲುಗಳೇನಾದರೂ ಇದ್ದಲ್ಲಿ, ಸೆ.25ಕ್ಕೆ ನಡೆಯುವ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.