ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ


ಬೆಳಗಾಯಿತು ವಾರ್ತೆ| Www.belagayithu.in
ಸಂಡೂರು: ಮಾದಕ ದ್ರವ್ಯ ಸೇವನೆಯಿಂದ ಯುವಜನರ ಭವಿಷ್ಯ ಹಾಳಾಗುತ್ತಿದ್ದು, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೆಕರ್ ಹೇಳಿದರು.
ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ಸಂಡೂರು ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ “RISE – ಬೇಡ Bro” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಮಾದಕ ದ್ರವ್ಯಗಳ ವ್ಯಸನದಿಂದ ದೂರವಿದ್ದು ಶಿಕ್ಷಣ, ಕ್ರೀಡೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಮಾಜವನ್ನು ರಕ್ಷಿಸುವ ಕಾರ್ಯದಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿದ್ದರು. ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ವಿವಿಧ ಮಾಹಿತಿ ಹಾಗೂ ಸಂದೇಶಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊಳ್ಳಲಾಯಿತು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles