ಬೆಳಗಾಯಿತು ವಾರ್ತೆ
ಬಳ್ಳಾರಿ: ಎಸ್ ಟಿ ಎಸ್ ಸಿ ಮೀಸಲಾತಿ ಹೆಚ್ಚಳ ಕುರಿತು ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ ವಾಲ್ಮೀಕಿ ಶ್ರೀಗಳ ಆದೇಶದ ಮೇರೆಗೆ ಜುಲೈ – 11ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಜಿಲ್ಲಾ ಕೇಂದ್ರಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ವಾಲ್ಮೀಕಿ ಸಮುದಾಯದ ಮುಖಂಡರಾದ ಶಿವ ಶಂಕರ್ ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ, ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಬಳ್ಳಾರಿ ಶೇಕಡ 15 ರಿಂದ 17 ಕ್ಕೆ ಮತ್ತು ಈ ಪಂಗಡದವರಿಗೆ ಶೇ 3ರಿಂದ 75 ಹಚಿಸುವ ಸಂಬಂದದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ವರದಿಯನ್ನು ಜಾರಿ ಗೊಳಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.
ವಾಲ್ಮೀಕಿ ನಾಯಕ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ನಲ್ಲಿ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ಧರಣಿ ಕುಳಿತು ಜುಲೈ 11ಕ್ಕೆ 152 ದಿನಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಕುರಿತು ಯಾವುದೇ ನಿರ್ಣಾಯ ತೆಗೆದುಕೊಳ್ಳದೆ ಕಾಲಹರಣ ಮಾಡುತ್ತಿದೆ. ಕರ್ನಾಟಕ ರಾಜ್ಯ, ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪರಮಪೂಜ್ಯ ಸ್ವಾಮೀಜಿಯವರ ನಿರ್ಣಯದಂತೆ ಜುಲೈ 11 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಹತ್ ಪ್ರತಿಭಟನೆಯೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಕಗ್ಗಲ್ ವೀರೇಶ್ , ರುದ್ರಪ್ಪ, ಮುಂಡ್ರಗಿ ನಾಗರಾಜ್, ಮಾನಯ್ಯ, ಹನುಮಂತು, ಎಂಎಸ್ ಸಿದ್ಧಪ್ಪ , ಮುನಿಯಪ್ಪ, ಜಯರಾಂ ಸೇರಿದಂತೆ ಇತರರು ಇದ್ದರು.