19.1 C
New York
Tuesday, August 16, 2022

Buy now

spot_img

ಕಲುಷಿತ ನೀರು ಸೇವಿಸಿ ಬಾಲಕಿ ಸಾವು

ಬೆಳಗಾಯಿತು ವಾರ್ತೆ
ಬಳ್ಳಾರಿ : ಕಂಪ್ಲಿ ತಾಲೂಕಿನ ಗೋನಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ೨೦ ಕ್ಕೂ ಹೆಚ್ಚು ಜನ ಅಸ್ವಸ್ಥ
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಗೋನಾಳ ಗ್ರಾಮದಲ್ಲಿ ನಡೆದಿದೆ.

ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣಗೊಂಡ ಪರಿಣಾಮ ಗ್ರಾಮಸ್ಥರ ಆರೋಗ್ಯದಲ್ಲಿ ಏರುಪೇರು ಆದ ಇನ್ನಲೆ ಗ್ರಾಮದ ೨೦ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ, ಶಾಲೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ಈ ವೇಳೆ ಸೋಮವಾರ ಬೆಳಗ್ಗೆ ಸುಕನ್ಯ ಎನ್ನುವ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಬಾಲಕಿ ಮೃತ ಪಟ್ಟಿದ್ದಾಳೆ.

ಗೋನಾಳ ಗ್ರಾಮದಲ್ಲಿ ಶುದ್ದ ಕುಡಿಯುವ ಘಟಕ ಸ್ಥಗಿತ ಹಿನ್ನಲೆ ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣ ಪರಿಣಾಮ ಗ್ರಾಮಸ್ಥರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಕಲುಷಿತ ನೀರು ಕುಡಿದು ಅಸ್ವಸ್ಥಳಾದ ಬಾಲಕಿ ಮೃತ ಪಟ್ಡಿರುವದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿಲ್ಪರಾಣಿ ಸೇರಿದಂತೆ ಆರೋಗ್ಯ ಅಧಿಕಾರಿಗಳು ಗೋನಾಳ್ ಗ್ರಾಮದಲ್ಲಿ ಮನೆ ಮನೆಗೆ ತೆರಳಿ, ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ವಾಂತಿ-ಭೇದಿ ನಿಯಂತ್ರಣಕ್ಕಾಗಿ ಎಲ್ಲಾ ರೀತಿಯಲ್ಲಿ ಗ್ರಾಪಂ ಹಾಗೂ ಆರೋಗ್ಯ ಅಧಿಕಾರಿಗಳು ಕ್ರಮವಹಿಸಿದ್ದಾರೆ.

ಜಿಪಂ ಸಿಇಓ ಲಿಂಗಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜನಾರ್ದನ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಾನ ಕಾರ್ಯ ಮುಂದ್ದುವರಿಸಿದ್ದರೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles