ರಾಕಿಂಗ್ ಸ್ಟಾರ್ ಯಶ್ ಮನೆಮೇಲೆಯೂ ರಾಷ್ಟ್ರಧ್ವಜ ರಾರಾಜಿಸುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದ ಯಶ್ ಎಲ್ಲರಿಗೂ ಧ್ವಜ ಹಾರಿಸುವಂತೆ ಕರೆಕೊಟ್ಟಿದ್ದರು. ಇಂದು ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಧ್ವಜ ಕೈಯಲ್ಲಿ ಹಿಡಿದು ದೇಶದ ಜನತೆಗೆ ಶುಭಕೋರಿದ್ದಾರೆ.
ದೇಶದಾದ್ಯಂತ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲೆಲ್ಲೂ ಅಜಾದಿ ಸ್ವಾತಂತ್ರ್ಯೋತ್ಸವ ಕಳೆಕಟ್ಟಿದೆ. ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದೇ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. 75ನೇ ಸ್ವಾತಂತ್ರ್ಯೋತ್ಸವದ ಈ ಅಮೃತಮಹೋತ್ಸವ ಘಳಿಗೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಯೊಬ್ಬರು ಮನೆಮೇಲೆ ರಾಷ್ಟ್ರಧ್ವಜ ಹಾರಿಸಿ ದೇಶಕ್ಕೆ ಗೌರವ ಸಲ್ಲಿಸಿದ್ದಾರೆ. ಸಿನಿಮಾ ಕಲಾವಿದರು ಸಹ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಕಲಾವಿದರು ಸಹ ಮನೆಮೇಲೆ ರಾಷ್ಟ್ರ ಧ್ವಜ ಹಾರಿಸಿದ್ದಾರೆ.