ಸುರಕ್ಷಿತವಾಗಿ ಮರಳಿದ ಕನ್ನಡಿಗರು

ಬೆಳಗಾಯಿತು ವಾರ್ತೆ | Www.belagayithu.in
ದೇವನಹಳ್ಳಿ: ಇರಾನ್–ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನತೆ ನಡುವೆಯೂ ಪ್ರಯಾಣಿಕರನ್ನು ಹೊತ್ತ ಎರಡು ವಿಮಾನಗಳು ಅಬುಧಾಬಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿವೆ.
ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿದ್ದ 51೦ ಪ್ರಯಾಣಿಕರು ತಾಯ್ನಾಡಿಗೆ ಬಂದಿಳಿದಿದ್ದು, ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
21೦ ಪ್ರಯಾಣಿಕರಿದ್ದ ಮೊದಲ ವಿಮಾನ ದೇವನಹಳ್ಳಿಯಲ್ಲಿ ಇಳಿಯಿತು. 3೦೦ ಪ್ರಯಾಣಿಕರನ್ನು ಹೊತ್ತ ಎರಡನೇ ವಿಮಾನ ಮಂಗಳವಾರ ಬೆಳಗಿನ ಜಾವ 3.20ಕ್ಕೆ ಬಂದಿಳಿದಿದೆ.
ಇರಾನ್–ಇಸ್ರೇಲ್ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿಯ ಉದ್ವಿಗ್ನ ಪರಿಸ್ಥಿತಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆಗಳು ಎರಡು ದಿನದ ಬಳಿಕ ಪುನಾರಂಭವಾಗಿದೆ.
ಇದರೊAದಿಗೆ ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿದ್ದ ನೂರಾರು ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ.
ಸುರಕ್ಷಿತವಾಗಿ ಮರಳಿದ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದು, ಯುದ್ಧದ ನಡುವೆಯೂ ಅಗತ್ಯ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಅಬುಧಾಬಿಯಲ್ಲಿ ಉಳಿದುಕೊಂಡಿದ್ದ ಅವಧಿಯಲ್ಲಿ ಪ್ರಯಾಣಿಕರಿಗೆ ಹೋಟೆಲ್ ಮತ್ತು ಸಾರಿಗೆ ಸೇರಿದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆ ಒದಗಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles