ಬೆಳಗಾಯಿತು ವಾರ್ತೆ | www.belagayithu.in
ರಾಂಚಿ: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿದೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ನಾಯಕ ಆಲಂಗೀರ್ ಆಲಂ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸದಿಂದ ಸುಮಾರು 20 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ.
ಬ್ಯಾಗ್, ಕಮೋಡ್‌ಗಳಲ್ಲಿ ಹಣವನ್ನು ಸಂಗ್ರಹಿಸಲಾಗಿತ್ತು. ಹಣ ಎಣಿಕೆ ಕಾರ್ಯ ನಡೆಯುತ್ತಿದೆ. ಸದ್ಯ ಇಡಿ ತನಿಖೆ ನಡೆಸುತ್ತಿರುವ ವೀರೇಂದ್ರ ಕೆ ರಾಮ್ ಪ್ರಕರಣದ ಹಣ ಇದಾಗಿದೆ ಎಂದು ಇಡಿ ಹೇಳಿದೆ.ಜಾರ್ಖಂಡ್‌ನಲ್ಲಿ ಮುಖ್ಯ ಎಂಜಿನಿಯರ್ ಆಗಿದ್ದ ವೀರೇಂದ್ರ ಕೆ ರಾಮ್ ಅವರು 100 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿದ ಆರೋಪ ಬಂದಿದೆ.