ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ವಾಲ್ಮೀಕಿ ಭವನದಲ್ಲಿ ಪಂಚಾಕ್ಷರಿ ಮಾರ್ಷಿಯಲ್ ಆರ್ಟ್ಸ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ 4ನೇ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯ ಸಮಾರೋಪ ಸಮಾರಂಭ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್ ಮಾತನಾಡಿ, ಕಳೆದ 20 ವರ್ಷಗಳಿಂದ ಈ ಸಂಸ್ಥೆ ಮಕ್ಕಳಿಗೆ ಉಚಿತವಾಗಿ ಕರಾಟೆ, ಯೋಗ, ಧಾನ್ಯವನ್ನು ಕಲಿಸುತ್ತಿರುವುದು ಶ್ಲಾಘನಿಯ ಎಂದರು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ ವಕೀಲರು ಹಾಗೂ ಬಳ್ಳಾರಿ ಬೆಳಗಾಯಿತು ದಿನ ಪತ್ರಿಕೆಯ ಸಂಸ್ಥಾಪಕರಾ ವಿಜಯ್‌ಕುಮಾರ್ ರವರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ರಾಷ್ಟçಮಟ್ಟದ ಕರಾಟೆ ಸ್ಪರ್ದೆ ಏರ್ಪಡಿಸಿ ಯಶಸ್ವಿಯಾಗುವುದು ಸುಲಭದ ಮಾತಲ್ಲ, ಆದರೆ ಪಂಚಾಕ್ಷರಿ ಮರ್ಷಿಯಲ್ ಆಟ್ಸ್ ಟ್ರಸ್ಟ್ ನಿಸ್ವಾರ್ಥ ಸೇವೆಯನ್ನು ನೋಡಿ ಎಲ್ಲಾರು ಅವರಿಗೆ ಸಹಕಾರ ನೀಡಿದ್ದರಿಂದ ಈ ಸ್ಪರ್ಧೆ ಯಶಸ್ವಿಯಾಗಿದೆ. ಮುಂದಿನ ದಿನಮಾನದಲ್ಲಿ ಇಂತಹ ಹಲವಾರು ಸ್ಪರ್ಧೆಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದರು.
