ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ ೧ ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ ಎಂದ