29.3 C
Bellary
Saturday, March 15, 2025

Localpin

spot_img

ಕರ್ನಾಟಕದ ಗ್ಯಾರಂಟಿ ಯೋಜಿನೆಗಳು ಇಡೀ ದೇಶಕ್ಕೆ ಮಾದರಿ

ಬೆಳಗಾಯಿತು ವಾರ್ತೆ | www.belagayithu.in

ಬೆಂಗಳೂರು, ಫೆ:12 : ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬಣ್ಣಿಸಿದರು. ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles